Ezekiel 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಙೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.
Kannada BSI Bible 2016
ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದುಷ್ಟನಿಗೆ - ಸತ್ತೇ ಸಾಯುವಿ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವದು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.
Kannada Bible (KNCL) BSI 2016
ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸದೆ, ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ನೀನು ಅವನಿಗೆ ಬುದ್ಧಿಹೇಳದೆ ಹೋದರೆ, ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.