Ezekiel 3:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಂದುವೇಳೆ ನೀನು ಒಬ್ಬ ದುಷ್ಟಮನುಷ್ಯನನ್ನು ಎಚ್ಚರಿಸಿ ಅವನು ಪಾಪ ಮಾಡದಂತೆ ಮತ್ತು ಅವನ ಜೀವಿತವನ್ನು ಘದಲಾವಣೆ ಮಾಡಲು ಹೇಳಿದ್ದಲ್ಲಿ ಆ ಮನುಷ್ಯನು ನಿನ್ನ ಮಾತುಗಳನ್ನು ಕೇಳಲು ನಿರಾಕರಿಸಿದರೆ, ಅವನು ಪಾಪ ಮಾಡುವುದರಿಂದ ಸಾಯುವನು. ಆದರೆ ನೀನು ನಿನ್ನ ಜೀವವನ್ನು ರಕ್ಷಿಸಿಕೊಳ್ಳುವಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
Kannada BSI Bible 2016
ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
Kannada Bible (KNCL) BSI 2016
ನೀನು ಆ ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧಕ್ಕಾಗಿ ಸಾಯುವನು; ನೀನಾದರೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ, ದುರ್ಮಾರ್ಗವನ್ನೂ ಬಿಟ್ಟು ತಿರುಗಿಕೊಳ್ಳದೆ ಹೋದರೆ, ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.