Ezekiel 3:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನಗೆ, “ಎದ್ದೇಳು, ಬಯಲು ಸೀಮೆಗೆ ಹೋಗು. ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, “ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.
Kannada BSI Bible 2016
ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ - ನೀನೆದ್ದು ಬೈಲುಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು ಎಂದು ಹೇಳಿದನು.
Kannada Bible (KNCL) BSI 2016
ಅದೇ ಸ್ಥಳದಲ್ಲಿ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನಗೆ, “ನೀನೆದ್ದು ಬಯಲುಪ್ರದೇಶಕ್ಕೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತಾಡುವೆನು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಲ್ಲಿ ಯೆಹೋವ ದೇವರ ಹಸ್ತವು ನನ್ನ ಮೇಲಿತ್ತು. ನನಗೆ ಅವರು ಹೇಳಿದ್ದೇನೆಂದರೆ, “ಎದ್ದೇಳು, ಬಯಲು ಸೀಮೆಗೆ ಹೋಗು ಮತ್ತು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು.”