Ezekiel 3:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭಾಷೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟಕರವಾದ ಅಥವಾ ಮಾತಾಡಲು ಕಷ್ಟವಾದ ಅಥವಾ ಪದಗಳನ್ನು ಅರ್ಥಮಾಡಿಕೊಳ್ಳಲು ನಿನಗೆ ಸಾಧ್ಯವಾಗದ ಅನೇಕ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತಿಲ್ಲ. ಆ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸಿದರೆ ಅವರು ಖಂಡಿತವಾಗಿಯೂ ಕಿವಿಗೊಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಬಳಿಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
Kannada BSI Bible 2016
ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ನಿನಗೆ ತಿಳಿಯಲಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಕಡೆಗೆ ನೀನು ಕಳುಹಿಸಲ್ಪಟ್ಟವನಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
Kannada Bible (KNCL) BSI 2016
ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಕಡೆಗೆ ಕಳುಹಿಸುತ್ತಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನನ್ನು ಅಸ್ಪಷ್ಟ ಮಾತು ಮತ್ತು ಅನ್ಯಭಾಷೆ ಹೊಂದಿರುವ ಅನೇಕ ಜನರ ಬಳಿ ಕಳುಹಿಸುತ್ತಿಲ್ಲ. ಏಕೆಂದರೆ ಅವರ ಪದಗಳು ನಿಮಗೆ ಅರ್ಥವಾಗುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ, ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.