Ezekiel 3:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವಜ್ರವು ಘಂಡೆಕಲ್ಲಿಗಿಂತ ಗಟ್ಟಿಯಾದ ವಸ್ತು. ಅದೇ ಪ್ರಕಾರ ನಿನ್ನ ತಲೆ ಅವರ ತಲೆಗಿಂತ ಗಟ್ಟಿಯಾಗಿರುವುದು. ಆ ಜನರಿಗೆ ಭಯಪಡಙೇಡ. ಅವರು ದಂಗೆಕೋರರಾಗಿದ್ದರೂ ಅವರ ಸಮ್ಮುಖದಲ್ಲಿ ಭಯಪಡಬೇಡ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು.”
Kannada BSI Bible 2016
ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಹಣೆಯನ್ನು ಕಗ್ಗಲ್ಲಿಗಿಂತ ಕಠಿನವಾದ ವಜ್ರದಷ್ಟು ಕಠಿನಪಡಿಸಿದ್ದೇನೆ; ಅವರು ದ್ರೋಹಿವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.
Kannada Bible (KNCL) BSI 2016
ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಕಠಿಣವಾದ ವಜ್ರದಷ್ಟು ಕಠಿಣಪಡಿಸಿದ್ದೇನೆ; ಅವರು ದ್ರೋಹಿ ವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನ ಹಣೆಯನ್ನು ಅತ್ಯಂತ ಕಠಿಣವಾದ ಕಲ್ಲಿನಂತೆಯೂ ವಜ್ರದಂತೆಯೂ ಮಾಡುವೆನು. ಅವರು ತಿರುಗಿಬೀಳುವ ಜನರಾದರೂ ನೀನು ಅವರಿಗೆ ಭಯಪಡಬೇಡ ಅಥವಾ ಗಾಬರಿಯಾಗಬೇಡ,” ಎಂದರು.