Ezekiel 30:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೈಲ್ ನದಿಯನ್ನು ನಾನು ಒಣನೆಲವನ್ನಾಗಿ ಮಾಡುವೆನು. ಆ ಒಣನೆಲವನ್ನು ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನ್ನು ಘಂಜರು ಭೂಮಿಯನ್ನಾಗಿ ಮಾಡಲು ನಾನು ಪರದೇಶಸ್ಥರನ್ನು ಉಪಯೋಗಿಸುವೆನು. ನನ್ನ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”
Kannada BSI Bible 2016
ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನದೀಶಾಖೆಗಳನ್ನು ಬತ್ತಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಯೆಹೋವನಾದ ನಾನೇ ನುಡಿದಿದ್ದೇನೆ.
Kannada Bible (KNCL) BSI 2016
ನಾನು ನದೀ ಶಾಖೆಗಳನ್ನು ಬತ್ತಿಸಿ, ದೇಶವನ್ನು ದುಷ್ಟರ ಕೈಗೆ ವಶಮಾಡಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಸರ್ವೇಶ್ವರನಾದ ನಾನೇ ನುಡಿದಿದ್ದೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ವಿದೇಶಿಯರ ಕೈಯಿಂದ ನಾಶಮಾಡಿಸುವೆನು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.