Ezekiel 30:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಈಜಿಪ್ಟಿನಲ್ಲಿರುವ ವಿಗ್ರಹಗಳನ್ನು ನಾನು ನಾಶಮಾಡುವೆನು. ಮೆಂಫೀಸಿನ ವಿಗ್ರಹಗಳನ್ನು ತೆಗೆದುಬಿಡುವೆನು. ಈಜಿಪ್ಟಿನಲ್ಲಿ ಇನ್ನು ಮುಂದೆ ರಾಜನಿರನು. ಅವರಲ್ಲಿ ಭಯವನ್ನು ಹುಟ್ಟಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನೋಫಿನ ಬೊಂಬೆಗಿಂಬೆಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್‍ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಮೂರ್ತಿಗಳನ್ನು ನಾಶಮಾಡುವೆನು. ಮತ್ತು ನೋಫಿನ ವಿಗ್ರಹಗಳನ್ನು ಕೊನೆಗೊಳಿಸುವೆನು. ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು.