Ezekiel 30:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಈಜಿಪ್ಟಿನ ನೊಗವನ್ನು ಮುರಿದಾಗ ತಹಪನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಊಕಾರಕ್ಕೆ ಅಂತ್ಯ ಬರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.
Kannada BSI Bible 2016
ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವದು, ಕಾರ್ಮುಗಿಲು ಅದನ್ನು ಆವರಿಸುವದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.
Kannada Bible (KNCL) BSI 2016
ಈಜಿಪ್ಟ್ ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವುದು. ಕಾರ್ಮುಗಿಲು ಅದನ್ನು ಆವರಿಸುವುದು. ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.