Ezekiel 30:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನಿನ ರಾಜನ ಕೈಗಳನ್ನು ನಾನು ಘಲಪಡಿಸುವೆನು. ನನ್ನ ಖಡ್ಗವನ್ನು ನಾನು ಅವನ ಕೈಯಲ್ಲಿಡುವೆನು. ಆದರೆ ಫರೋಹನ ಕೈಗಳನ್ನು ನಾನು ಮುರಿಯುವೆನು. ಆಗ ನೋವಿನಿಂದ ಫರೋಹನು ಕಿರುಚುವನು. ಒಬ್ಬ ಸಾಯುವ ಮನುಷ್ಯನು ಕಿರುಚುವಂತೆ ಆ ಶಘ್ದವು ಇರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.
Kannada BSI Bible 2016
ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು ಗಾಯದಿಂದ ಪ್ರಾಣಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.
Kannada Bible (KNCL) BSI 2016
ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸಿ, ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು, ಫರೋಹನ ಕೈಗಳನ್ನು ಮುರಿಸುವಾಗ ಗಾಯದಿಂದ ಪ್ರಾಣಸಂಕಟ ಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನ ತೋಳುಗಳನ್ನು ನಾನು ಬಲಪಡಿಸುವೆನು, ಅವನ ಕೈಯಲ್ಲಿ ನನ್ನ ಖಡ್ಗವನ್ನಿಡುವೆನು. ಫರೋಹನ ತೋಳುಗಳು ಬಿದ್ದು ಹೋಗುವುವು. ಇವನು ಅವನ ಮುಂದೆ ಗಾಯ ಹೊಂದಿದವನಂತೆ ನರಳಾಡುವನು.