Ezekiel 30:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಬಾಬಿಲೋನಿನ ರಾಜನ ಕೈಗಳನ್ನು ಘಲಪಡಿಸುವೆನು. ಫರೋಹನ ಕೈಗಳು ಜೋಲುಬೀಳುವವು. ಆಗ ಅವರು ನಾನೇ ಯೆಹೋವನೆಂದು ತಿಳಿಯುವರು. “ನನ್ನ ಖಡ್ಗವನ್ನು ನಾನು ಬಾಬಿಲೋನ್ ರಾಜನ ಕೈಗಳಲ್ಲಿ ಇಡುವೆನು. ಆಗ ಅವನು ಈಜಿಪ್ಟಿನ ಕಡೆಗೆ ಅದನ್ನು ಚಾಚುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು.
Kannada BSI Bible 2016
ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು ಎಂದು ಎಲ್ಲರಿಗೆ ಗೊತ್ತಾಗುವದು.
Kannada Bible (KNCL) BSI 2016
ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವುವು; ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನಿಗೆ ಎತ್ತುವೆನು. ಅವನು ಅದನ್ನು ಈಜಿಪ್ಟ್ ದೇಶದ ಮೇಲೆ ಎತ್ತುವನು. ಆಗ ನಾನೇ ಸರ್ವೇಶ್ವರ ಎಂದು ಎಲ್ಲರಿಗೆ ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುತ್ತೇನೆ, ಆದರೆ ಫರೋಹನ ಕೈಗಳು ಬಲಹೀನವಾಗುವುವು. ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನ ಕೈಗೆ ಕೊಡುವೆನು. ಅವನು ಅದನ್ನು ಈಜಿಪ್ಟಿನ ವಿರೋಧವಾಗಿ ಪ್ರಯೋಗಿಸುವನು. ಆಗ ಅವರು ನಾನೇ ಯೆಹೋವ ದೇವರು ಎಂದು ತಿಳಿದುಕೊಳ್ಳುವರು.