Ezekiel 30:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಈಜಿಪ್ಟಿನ ಜನರನ್ನು ದೇಶಾಂತರ ಚದರಿಸಿಬಿಡುವೆನು. ಆಗ ನಾನು ಯೆಹೋವನೆಂದು ಅವರು ತಿಳಿದುಕೊಳ್ಳುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದು ಬರುವುದು.”
Kannada BSI Bible 2016
ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದುಬರುವದು.
Kannada Bible (KNCL) BSI 2016
ನಾನು ಈಜಿಪ್ಟರನ್ನು ಜನಾಂಗಗಳಲ್ಲಿ ಚದರಿಸಿ ದೇಶವಿದೇಶಗಳಿಗೆ ತೂರಿಬಿಡುವಾಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈಜಿಪ್ಟಿನವರನ್ನು ಜನಾಂಗಗಳೊಗೆ ಚದುರಿಸಿ ದೇಶಗಳಲ್ಲಿ ಹರಡಿಸುತ್ತೇನೆ; ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”