Ezekiel 30:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದಿನವು ಹತ್ತಿರ ಘಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಘಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.
Kannada BSI Bible 2016
ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಿನವು ಹತ್ತಿರವಾಯಿತು; ಹೌದು, ಯೆಹೋವನ ದಿನ, ಕಾರ್ಮುಗಿಲಿನ ದಿನ ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯ ತೀರಿಸತಕ್ಕ ಕಾಲ.
Kannada Bible (KNCL) BSI 2016
ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.