Ezekiel 30:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನಲ್ಲಿ ನಾನು ಹೊತ್ತಿಸಿದ ಬೆಂಕಿಯು ಅದರ ಸಹಾಯಕರನ್ನು ದಹಿಸುವದು. ಆಗ ನಾನು ಯೆಹೋವನೆಂದು ಅವರು ತಿಳಿಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.
Kannada BSI Bible 2016
ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಐಗುಪ್ತಕ್ಕೆ ಬೆಂಕಿಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.
Kannada Bible (KNCL) BSI 2016
ನಾನು ಈಜಿಪ್ಟಿಗೆ ಬೆಂಕಿಹಚ್ಚಿ, ಅದರ ಸಹಾಯಕರನ್ನೆಲ್ಲ ನಾಶಮಾಡಿದ ಮೇಲೆ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈಜಿಪ್ಟಿನಲ್ಲಿ ಬೆಂಕಿಯಿಟ್ಟ ಮೇಲೆ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಯೆಹೋವ ದೇವರೆಂದು ತಿಳಿಯುವುದು.