Ezekiel 30:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘“ಆ ಸಮಯದಲ್ಲಿ, ನಾನು ಸಂದೇಶವಾಹಕರನ್ನು ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನ್ನು ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಬರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!’”
Kannada BSI Bible 2016
ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶನದಿನದಲ್ಲಿ ಕೂಷ್ಯರಿಗೂ ಸಂಕಟವಾಗುವದು; ಇಗೋ ಬಂತು.
Kannada Bible (KNCL) BSI 2016
“ಆ ದಿನಗಳಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು, ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಸುಡಾನರನ್ನು ಹೆದರಿಸುವರು; ಈಜಿಪ್ಟಿನ ವಿನಾಶ ದಿನದಲ್ಲಿ ಸುಡಾನರಿಗೂ ಸಂಕಟವಾಗುವುದು; ಇಗೋ, ಆ ದಿನ ಬಂದಿತು!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.