Ezekiel 31:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಬೆಳೆಯಿತು. ಅದರ ತುದಿ ಮುಗಿಲನ್ನು ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನ್ನು ತಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು.
Kannada BSI Bible 2016
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿಯನ್ನು ಮೋಡಕ್ಕೆ ತಗಲಿಸಿ ತನ್ನ ನೀಳದ ವಿಷಯವಾಗಿ ಉಬ್ಬಿಕೊಂಡದರಿಂದ
Kannada Bible (KNCL) BSI 2016
“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿ ಮೋಡಕ್ಕೆ ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು.