Ezekiel 31:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ಒಬ್ಬ ಘಲಾಢ್ಯನಾದ ರಾಜನು ಬಂದು ಆ ಮರವನ್ನು ತೆಗೆದುಕೊಳ್ಳುವಂತೆ ಮಾಡಿದೆನು. ಆ ರಾಜನು ಮರವು ಮಾಡಿದ ದುಷ್ಕೃತ್ಯಗಳಿಗಾಗಿ ಅದನ್ನು ಶಿಕ್ಷಿಸಿದನು. ಆ ಮರವನ್ನು ನಾನು ನನ್ನ ತೋಟದಿಂದ ತೆಗೆದು ಹಾಕಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ.
Kannada BSI Bible 2016
ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅದನ್ನು ಜನಾಂಗಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ದಂಡಿಸುವನು; ನಾನು ಅದನ್ನು ತಳ್ಳಿಹಾಕಿದೆನು.
Kannada Bible (KNCL) BSI 2016
ಅದುದರಿಂದ ನಾನು ಅದನ್ನು ರಾಷ್ಟ್ರಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ತೀರುವನು; ನಾನು ಅದನ್ನು ತಳ್ಳಿಹಾಕಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ಅವನನ್ನು ಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಕೊಟ್ಟಿದ್ದೇನೆ. ಇವನು ನಿಶ್ಚಯವಾಗಿ ಅದನ್ನು ದಂಡಿಸುತ್ತಾನೆ ಅದರ ದುಷ್ಟತ್ವದ ನಿಮಿತ್ತ ನಾನು ಅದನ್ನು ತಳ್ಳಿಹಾಕಿದ್ದೇನೆ.