Ezekiel 31:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರದೇಶದ ಕ್ರೂರ ಜನರು ಅದನ್ನು ಕಡಿದು ಅದರ ರೆಂಬೆಗಳನೆಐಲ್ಲಾ ಬೆಟ್ಟ, ಬಯಲು, ತಗ್ಗುಗಳಲ್ಲಿ ಚದರಿಸಿಬಿಟ್ಟರು. ಅದರ ಮುರಿಯಲ್ಪಟ್ಟ ಕೊಂಬೆಗಳು ಆ ದೇಶದಲ್ಲಿ ಹರಿಯುವ ನದಿಯಲ್ಲಿ ತೇಲಿದವು. ಆ ಮರದಡಿಯಲ್ಲಿ ಈಗ ನೆರಳು ಇಲ್ಲ. ಆದ್ದರಿಂದ ಅಲ್ಲಿ ವಾಸವಾಗಿದ್ದ ಜನರೆಲ್ಲಾ ಅಲ್ಲಿಂದ ಹೊರಟುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.
Kannada BSI Bible 2016
ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅತಿಭಯಂಕರ ಜನಾಂಗದವರಾದ ಮ್ಲೇಚ್ಫರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲಿಯೂ ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ತೊರೆಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತಜನಾಂಗಗಳು ಅದರ ನೆರಳಿನಿಂದ ತೊಲಗಿ ಅದನ್ನು ಬಿಟ್ಟುಹೋಗಿವೆ.
Kannada Bible (KNCL) BSI 2016
ಅತಿಭಯಂಕರ ರಾಷ್ಟ್ರದವರಾದ ಮ್ಲೇಚ್ಛರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲೂ ಎಲ್ಲ ಹಳ್ಳಕೊಳ್ಳಗಳಲ್ಲೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲ ತೊರೆಗಳ ಹತ್ತಿರ ಮುರಿದುಬಿದ್ದಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ತೊಲಗಿಹೋಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗಗಳಲ್ಲಿ ಭಯಂಕರವಾದ ವಿದೇಶಿಯರು ಅದನ್ನು ಕಡಿದುಹಾಕುವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅದರ ಕೊಂಬೆಗಳು ಬೀಳುವುವು. ದೇಶದ ಹಳ್ಳಗಳಲ್ಲೆಲ್ಲಾ ಅದರ ರೆಂಬೆಗಳು ಮುರಿದು ಹೋಗುವುವು. ಭೂಮಿಯ ಜನಗಳೆಲ್ಲಾ ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಡುವರು.