Ezekiel 31:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ: “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರನ್ನು ಅಳುವಂತೆ ಮಾಡಿದೆನು. ಅದನ್ನು ನಾನು ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನ್ನೂ ಬೇರೆ ನೀರಿನ ತೊರೆಗಳನ್ನೂ ನಿಲ್ಲಿಸಿಬಿಟ್ಟೆನು. ಲೆಘನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ಆ ದೊಡ್ಡ ಮರವು ಹೋದುದಕ್ಕಾಗಿ ಆ ಪ್ರಾಂತ್ಯದ ಬೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಆ ವೃಕ್ಷವು ಪಾತಾಳಕ್ಕೆ ಇಳಿದುಹೋದ ದಿನದಲ್ಲಿ ನಾನು ದುಃಖದ ಚಿಹ್ನೆಗಳನ್ನು ಏರ್ಪಡಿಸಿದೆನು; ಅದರ ವಿಯೋಗಕ್ಕಾಗಿ ನಾನು ಮಹಾನದಿಯನ್ನು ಮರೆಮಾಡಿ ನದಿಯ ಶಾಖೆಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂವಿುಯ ಸಕಲ ವೃಕ್ಷಗಳು ಆ ದುಃಖಕ್ಕೆ ಮೂರ್ಛೆಹೋದವು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಆ ವೃಕ್ಷ ಪಾತಾಳಕ್ಕೆ ಇಳಿದುಹೋದ ದಿನದಲ್ಲಿ ನಾನು ದುಃಖದ ಚಿಹ್ನೆಗಳನ್ನು ಏರ್ಪಡಿಸಿದೆ; ಅದರ ವಿಯೋಗಕ್ಕಾಗಿ ನಾನು ಮಹಾನದಿಯನ್ನು ಮರೆಮಾಡಿ, ನದಿಯ ಶಾಖೆಗಳನ್ನು ತಡೆದುಬಿಟ್ಟೆ; ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆ. ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಮೂರ್ಛೆಹೋದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮಾಧಿಗೆ ಇಳಿದ ದಿನದಲ್ಲಿ ನಾನು ಆಳವಾದ ಬುಗ್ಗೆಗಳನ್ನು ದುಃಖದಿಂದ ಮುಚ್ಚಿದೆನು; ನಾನು ಅದರ ಪ್ರವಾಹವನ್ನು ತಡೆಹಿಡಿದೆನು. ಮಹಾಜಲವನ್ನು ನಿಲ್ಲಿಸಿದೆನು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಿಡುವಂತೆ ಮಾಡಿದೆನು. ಬಯಲಿನ ಮರಗಳೆಲ್ಲಾ ಕುಗ್ಗಿಹೋದವು.