Ezekiel 31:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ಆ ಮರವೂ ಅದರ ನೆರಳಿನ ಆಶ್ರಯವನ್ನು ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ ಯುದ್ಧದಲ್ಲಿ ಸತ್ತುಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು.
Kannada BSI Bible 2016
ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು ಖಡ್ಗಹತರ ಜೊತೆಗೆ ಸೇರಿದರು.
Kannada Bible (KNCL) BSI 2016
ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು.