Ezekiel 31:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಘಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವಿ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವಿ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”
Kannada BSI Bible 2016
ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥಾ ವೈಭವದಿಂದಲೂ ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವಿ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”