Ezekiel 31:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಶ್ಶೂರವು ಲೆಘನೋನಿನಲ್ಲಿರುವ ದೇವದಾರು ಮರದಂತೆ ಎತ್ತರವಾಗಿ, ಸುಂದರವಾದ ಕೊಂಬೆಗಳಿಂದಲೂ ಕಾಡಿನ ನೆರಳಿನಲ್ಲಿಯೂ ಶೋಭಿಸುತ್ತದೆ. ಅದರ ಮೇಲಿನ ತುದಿಯು ಮುಗಿಲನ್ನು ಮುಟ್ಟುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
Kannada BSI Bible 2016
ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ತಿಲಕವೋ ದೇವದಾರುವೋ ಒಂದು ವೃಕ್ಷವು ಲೆಬನೋನಿನಲ್ಲಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ, ಅದರ ಎತ್ತರವು ಬಹಳ, ಅದರ ತುದಿಯು ಮೇಘಚುಂಬಿತ.
Kannada Bible (KNCL) BSI 2016
ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನನಾರು? ಲೆಬನೋನಿನಲ್ಲಿ ದೇವದಾರು ವೃಕ್ಷವೊಂದಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ ಅದರ ಎತ್ತರ ಬಹಳ, ಅದರ ತುದಿ ಮೇಘಚುಂಬಿತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಬಹಳ ಎತ್ತರವಾಗಿದೆ, ಅದರ ತುದಿಯು ದಟ್ಟವಾದ ಕೊಂಬೆಗಳ ನಡುವೆಯಿತ್ತು.