Ezekiel 31:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ಯಾಕೆಂದರೆ ಈ ಮರವು ಬೇರೆ ಮರಗಳಿಗಿಂತ ಉನ್ನತವಾಗಿ ಕಾಣಿಸಿಕೊಳ್ಳಲು, ಅದು ಅನೇಕ ಕೊಂಬೆಗಳನ್ನು ಬಿಟ್ಟಿತು. ಅಲ್ಲಿ ಙೇಕಾದಷ್ಟು ನೀರು ಇದ್ದುದರಿಂದ ಕೊಂಬೆಗಳು ಉದ್ದವಾಗಿಯೂ ವಿಶಾಲವಾಗಿಯೂ ಬೆಳೆದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು; ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.
Kannada BSI Bible 2016
ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಅತ್ಯುನ್ನತವಾಗಿತ್ತು; ಅದರ ಕೊಂಬೆಗಳು ನಿಬಿಡವಾಗಿದ್ದವು; ಅಲ್ಲಿ ನೀರಾವರಿಯಿದ್ದ ಕಾರಣ ಅದರ ರೆಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.
Kannada Bible (KNCL) BSI 2016
ಇಂತಿರಲು ವನವೃಕ್ಷಗಳಲೆಲ್ಲ ಆ ವೃಕ್ಷ ಅತ್ಯುನ್ನತವಾಗಿತ್ತು ಅದರ ರೆಂಬೆಗಳು ನಿಬಿಡವಾಗಿದ್ದವು, ಉದ್ದುದ್ದ ಚಾಚಿಕೊಂಡಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರಗಳಿಗಿಂತ ಎತ್ತರವಾಗಿತ್ತು. ಅದು ಹಬ್ಬಿದ್ದುದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.