Ezekiel 31:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ಗೂಡುಗಳನ್ನು ಕಟ್ಟಿದವು. ಆ ಮರದ ಅಡಿಯಲ್ಲಿ ಪ್ರಾಣಿಗಳು ಮರಿಗಳನ್ನು ಈದವು. ಆ ಮರದ ನೆರಳಿನಲ್ಲಿ ಎಲ್ಲಾ ದೊಡ್ಡ ಜನಾಂಗಗಳು ವಾಸಿಸಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು.
Kannada BSI Bible 2016
ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಆಕಾಶಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಮಾಡಿಕೊಂಡಿದ್ದವು; ಸಮಸ್ತಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳನ್ನು ಈಯುತ್ತಿದ್ದವು; ಮಹಾಜನಾಂಗಗಳೆಲ್ಲಾ ಅದರ ನೆರಳನ್ನು ಆಶ್ರಯಿಸಿದ್ದವು.
Kannada Bible (KNCL) BSI 2016
ಆ ರೆಂಬೆಗಳಲ್ಲಿ ಗೂಡುಮಾಡಿದ್ದವು ಆಕಾಶದ ಪಕ್ಷಿಗಳೆಲ್ಲವು ಅದರಡಿಯಲಿ ಮರಿಗಳನೀಯುತ್ತಿದ್ದವು ಭೂಜಂತುಗಳೆಲ್ಲವು ಅದರ ನೆರಳನಾಶ್ರಯಿಸುತ್ತಿದ್ದವು ಮಹಾಜನಾಂಗಗಳೆಲ್ಲವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು. ಅದರ ರೆಂಬೆಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮ ಕೊಟ್ಟವು. ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.