Ezekiel 31:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮರವು ಮನೋಹರವಾಗಿತ್ತು. ಅದು ದೊಡ್ಡದಾಗಿತ್ತು. ಅದರ ಕೊಂಬೆಗಳು ವಿಶಾಲವಾಗಿದ್ದವು. ಅದರ ಙೇರುಗಳಿಗೆ ಧಾರಾಳವಾದ ನೀರಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಅದು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ನೀಳವಾದ ಕೊಂಬೆಗಳಿಂದ ಕಂಗೊಳಿಸುತ್ತಿತ್ತು. ಏಕೆಂದರೆ ಅದರ ಬೇರು ಸಾಕಷ್ಟು ನೀರಿನ ಆಸರೆ ಪಡೆದಿತ್ತು.
Kannada BSI Bible 2016
ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಬೇರಿಗೆ ಜಲಾಸರೆಯಿದ್ದದರಿಂದ ಆ ಮರವು ಎತ್ತರದಿಂದಲೂ ಕೊಂಬೆಗಳ ನೀಳದಿಂದಲೂ ಕಂಗೊಳಿಸುತ್ತಿತ್ತು.
Kannada Bible (KNCL) BSI 2016
ಬೇರಿಗೆ ಬೇಕಾದ ಜಲಾಸರೆ ಪಡೆದಿದ್ದ ಆ ಮರವು ಎತ್ತರದಿಂದ, ನೀಳವಾದ ರೆಂಬೆಗಳಿಂದ ಕಂಗೊಳಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅದರ ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ನೀಳವಾದ ಕೊಂಬೆಗಳಿಂದ ಸುಂದರವಾಗಿತ್ತು. ಏಕೆಂದರೆ ಅದರ ಬೇರು ಸಾಕಷ್ಟು ನೀರಿನ ಆಸರೆ ಪಡೆದಿತ್ತು.