Ezekiel 31:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ತೋಟದಲ್ಲಿರುವ ದೇವದಾರು ಮರಗಳೂ ಈ ಮರದಷ್ಟು ಎತ್ತರವಾಗಿರಲಿಲ್ಲ. ಈ ಮಹಾ ಮರಕ್ಕಿರುವಷ್ಟು ಕೊಂಬೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.
Kannada BSI Bible 2016
ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮುಚ್ಚಲಾರದೆ ಹೋದವು; ತುರಾಯಿಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ; ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.
Kannada Bible (KNCL) BSI 2016
ದೇವೋದ್ಯಾನದ ಇತರ ದೇವದಾರುಗಳಿಂದ ಅದನು ಮುಚ್ಚಲಾಗಲಿಲ್ಲ. ತುರಾಯಿ ಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ. ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ. ದೇವರವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ತೋಟದ ದೇವದಾರುಗಳು ಅದನ್ನು ಮರೆಮಾಡಲಿಲ್ಲ. ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ. ಆಲದ ಮರಗಳು ಅದರ ರೆಂಬೆಗಳಷ್ಟೂ ಇಲ್ಲ. ಆ ದೇವರ ತೋಟದ ಯಾವುದೇ ಮರವು ಇದರ ಸೌಂದರ್ಯಕ್ಕೆ ಸಮವಾಗಿಲ್ಲ.