Ezekiel 32:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜನರು ಈಜಿಪ್ಟಿನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು. ಬೇರೆ ದೇಶಗಳಲ್ಲಿರುವ ಹೆಣ್ಣುಮಕ್ಕಳು ಈ ಶೋಕಗೀತೆಯನ್ನು ಹಾಡುವರು. ಅವರು ಈಜಿಪ್ಟ್ ಮತ್ತು ಅದರ ಎಲ್ಲಾ ಜನರ ಕುರಿತು ಈ ಶೋಕಗೀತೆಯನ್ನು ಹಾಡುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಲಾಪಿಸುವವರು ಈ ಶೋಕ ಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಾಡಲಿ; ಐಗುಪ್ತಕ್ಕಾಗಿಯೂ, ಅಲ್ಲಿನ ಬಹು ಪ್ರಜೆಗಳಿಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಲಾಪಿಸುವವರು ಈ ಶೋಕಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಐಗುಪ್ತಕ್ಕಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತವನ್ನು ಹಾಡಲಿ; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಪ್ರಲಾಪಿಸುವವರು ಈ ಶೋಕಗೀತವನ್ನು ಹಾಡಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಈಜಿಪ್ಟಿಗಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ; ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ. ಈಜಿಪ್ಟಿನ ವಿಷಯವಾಗಿಯೂ ಅದರ ಎಲ್ಲಾ ಜನಸಮೂಹದ ವಿಷಯವಾಗಿಯೂ ಜನಾಂಗಗಳ ಪುತ್ರಿಯರು ಇದನ್ನು ಕುರಿತು ಗೋಳಾಡುವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”