Ezekiel 32:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”
Kannada BSI Bible 2016
ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕಗೀತವನ್ನೆತ್ತಿ ಅವನಿಗೆ ಹೀಗೆ ನುಡಿ - ನೀನು ಜನಾಂಗಗಳಲ್ಲಿ ಮೃಗರಾಜನೆನಿಸಿಕೊಂಡಿದ್ದಿ; ಇಗೋ ಮಹಾನದಿಯಲ್ಲಿನ ಪೇರ್ಮೊಸಳೆಯಾಗಿಬಿಟ್ಟಿ; ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದಿ.
Kannada Bible (KNCL) BSI 2016
“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ: “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.