Ezekiel 32:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಶೂರರು, ಘಲಶಾಲಿಗಳು ಯುದ್ಧದಲ್ಲಿ ಮಡಿದಿದ್ದಾರೆ, ಆ ಪರದೇಶಿಗಳು ಮರಣದ ಸ್ಥಳಕ್ಕೆ ಹೋದರು. ಅವರು ಅಲ್ಲಿದ್ದುಕೊಂಡು ಈಜಿಪ್ಟಿನವರೊಂದಿಗೆ ಮತ್ತು ಅದರ ಸಹಾಯಕರೊಂದಿಗೆ ಮಾತನಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ, ‘ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ’ ಅಂದುಕೊಳ್ಳುವರು.
Kannada BSI Bible 2016
ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾತಾಳದೊಳಗಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು ಅಂದುಕೊಳ್ಳುವರು.
Kannada Bible (KNCL) BSI 2016
ಪಾತಾಳದಲ್ಲಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ, “ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು’ ಎಂದುಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸತ್ತವರ ಕ್ಷೇತ್ರದೊಳಗಿಂದ ಪ್ರಬಲ ನಾಯಕರು ಈಜಿಪ್ಟ್ ಮತ್ತು ಅವಳ ಮಿತ್ರರಾಷ್ಟ್ರಗಳ ಬಗ್ಗೆ ಹೇಳುವರು, ‘ಅವರು ಇಳಿದು ಹೋಗಿ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿ ಮಲಗಿದ್ದಾರೆ.’