Ezekiel 32:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅಶ್ಶೂರವೂ ಅದರ ಎಲ್ಲಾ ಸೈನ್ಯವೂ ಆ ಪಾತಾಳದಲ್ಲಿರುವದು. ಅವರ ಸ್ಥಳವು ಆಳವಾದ ಗುಂಡಿಯಲ್ಲಿರುವದು. ಆ ಅಶ್ಶೂರದ ಸೈನಿಕರೆಲ್ಲಾ ರಣರಂಗದಲ್ಲಿ ಮಡಿದವರೇ. ಅವರ ಸಮಾಊಗಳು ಅಶ್ಶೂರದ ಸಮಾಊಯ ಸುತ್ತಮುತ್ತ ಇವೆ. ಅವರು ಜೀವಂತರಾಗಿರುವಾಗ ಜನರನ್ನು ಭೀತಿಗೊಳಿಸುತ್ತಿದ್ದರು. ಆದರೆ ಈಗ ಮೌನವಾಗಿದ್ದಾರೆ. ಅವರೆಲ್ಲಾ ಯುದ್ಧದಲ್ಲಿ ಸತ್ತರು. (Verses 22-23)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶ್ಶೂರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು.
Kannada BSI Bible 2016
ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಶ್ಶೂರವೂ ಅದರ ಜನ ಯಾವತ್ತೂ ಅಲ್ಲಿರುತ್ತವೆ; ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗಹತರು;
Kannada Bible (KNCL) BSI 2016
“ಅಸ್ಸೀರಿಯ ಮತ್ತು ಅದರ ಜನತೆ ಯಾವಾಗಲು ಅಲ್ಲಿರುವುವು; ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗಹತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಲ್ಲಿ ಅಸ್ಸೀರಿಯ ಮತ್ತು ಅದರ ಎಲ್ಲಾ ಗುಂಪು ಇರುವುದು. ಅಸ್ಸೀರಿಯದ ಸುತ್ತಲೂ ಖಡ್ಗದಿಂದ ಹತರಾದವರ ಸಮಾಧಿಗಳಿರುವುವು;