Ezekiel 32:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಲಾಮ್ ಮತ್ತು ಯುದ್ಧದಲ್ಲಿ ಮಡಿದ ಅದರ ಎಲ್ಲಾ ಸೈನಿಕರಿಗೂ ಅಲ್ಲಿ ಅವರು ಹಾಸಿಗೆಯನ್ನು ಸಿದ್ಧಮಾಡಿದರು. ಏಲಾಮಿನ ಸೈನ್ಯವು ಅದರ ಸಮಾಊಯ ಸುತ್ತಲೂ ಇವೆ. ಅವರೆಲ್ಲಾ ರಣರಂಗದಲ್ಲಿ ಸತ್ತವರು. ಅವರು ಜೀವದಿಂದಿರುವಾಗ ಜನರನ್ನು ಹೆದರಿಸಿದ್ದರು. ಆದರೆ ಅವರೀಗ ತಮ್ಮ ನಾಚಿಕೆಯೊಂದಿಗೆ ಪಾತಾಳ ಸೇರಿದ್ದಾರೆ. ಅವರು ಸತ್ತವರೊಂದಿಗೆ ಸೇರಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು, ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳವು ಏರ್ಪಾಡಾಗಿದೆ.
Kannada BSI Bible 2016
ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಲಾಮು ಮಲಗುವದಕ್ಕೆ ಹತರಾದ ಅದರ ಪ್ರಜೆಗಳೆಲ್ಲರ ನಡುವೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು ಪ್ರೇತಗಳ ಜೊತೆಗೆ ಸೇರಿ ಅವಮಾನಪಟ್ಟವರಾಗಿದ್ದಾರೆ; ಸಂಹೃತರ ಮಧ್ಯದಲ್ಲೇ ಏಲಾವಿುಗೆ ಸ್ಥಳವು ಏರ್ಪಾಟಾಗಿದೆ.
Kannada Bible (KNCL) BSI 2016
ಏಲಾಮು ಮಲಗುವುದಕ್ಕೆ, ಹತರಾದ ಅದರ ಪ್ರಜೆಗಳೆಲ್ಲರ ನಡುವೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತಮುತ್ತಲಿವೆ. ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು ಪ್ರೇತಗಳ ಜೊತೆಗೆ ಸೇರಿ ಅವಮಾನಪಟ್ಟವರಾಗಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳ ಏರ್ಪಾಡಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವರ ಎಲ್ಲಾ ಸಮೂಹಕ್ಕೂ ಹತರಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ. ಅದರ ಸುತ್ತಲೂ ಅವರ ಸಮಾಧಿಗಳಿವೆ. ಅವರೆಲ್ಲರೂ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿದ್ದಾರೆ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಕುಳಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡು ಹತರಾದವರ ಮಧ್ಯದಲ್ಲಿ ಇಡಲಾಗಿದೆ.