Ezekiel 32:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮೆಷಕ್, ತೂಘಲ್ ಮತ್ತು ಅವರ ಎಲ್ಲಾ ಸೈನ್ಯದವರು ಅಲ್ಲಿದ್ದಾರೆ. ಅವರ ಸಮಾಊಗಳು ಸುತ್ತಲೂ ಇವೆ. ಅವರೆಲ್ಲಾ ಯುದ್ಧದಲ್ಲಿ ಸತ್ತವರು. ಅವರು ಜೀವಿಸಿದ್ದಾಗ ಜನರಿಗೆ ಹೆದರಿಕೆಯನ್ನುಟುಮಾಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ.
Kannada BSI Bible 2016
ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆಷೆಕೂ ತೂಬಲೂ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದರಲ್ಲಾ;
Kannada Bible (KNCL) BSI 2016
“ಮೆಷೆಕ್, ತೂಬಲ್ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತಾರೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು, ಜೀವಲೋಕದಲ್ಲಿ ಅವರು ಭೀಕರರಾಗಿದ್ದರಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಲ್ಲಿ ಮೆಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ. ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಸುನ್ನತಿಯಿಲ್ಲದೆ ಖಡ್ಗದಿಂದ ಹತರಾದವರು.