Ezekiel 32:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ಅವರು ಘಹಳ ಕಾಲದ ಹಿಂದೆ ಸತ್ತ ವೀರರೊಂದಿಗೆ ಬಿದ್ದುಕೊಂಡಿದ್ದಾರೆ. ಅವರು ತಮ್ಮ ಆಯುಧಗಳೊಂದಿಗೆ ಹೂಣಿಡಲ್ಪಟ್ಟರು. ಅವರ ತಲೆಯ ಕೆಳಗೆ ಅವರ ಕತ್ತಿಯು ಇಡಲ್ಪಟ್ಟಿತ್ತು. ಆದರೆ ಅವರ ಪಾಪವು ಅವರ ಎಲುಬುಗಳಲ್ಲಿವೆ. ಯಾಕೆಂದರೆ ಅವರು ಜೀವಿಸಿದ್ದಾಗ ಜನರನ್ನು ಭಯಪಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ, ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ?
Kannada BSI Bible 2016
ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಪೂರ್ವದಲ್ಲಿ] ಯಾವ ಸುನ್ನತಿಹೀನ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ ಆಯುಧಸಹಿತ ಪಾತಾಳಕ್ಕೆ ಇಳಿದು ಕತ್ತಿಗಳನ್ನು ತಲೆಗಿಂಬುಮಾಡಿಕೊಂಡು ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ?
Kannada Bible (KNCL) BSI 2016
ಪೂರ್ವದಲ್ಲಿ ಯಾವ ಸುನ್ನತಿಹೀನ ಶೂರರು, ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು, ಹತರಾಗಿ ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದರೋ ಅವರ ನಡುವೆ ಮೆಷೆಕಿನವರೂ, ತೂಬಲಿನವರೂ ನೆಲಸದೆಹೋಗುವರೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತಹ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಖಡ್ಗಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ. ಅವರ ಗುರಾಣಿಗಳು ಅವರ ಮೂಳೆಗಳ ಮೇಲೆ ಇಡಲಾದವು. ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರರಾಗಿದ್ದರೂ ಅವರ ಅಕ್ರಮಗಳು ಅವರ ಎಲುಬುಗಳ ಮೇಲೆ ಇರುವುವು.