Ezekiel 32:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈಜಿಪ್ಟೇ, ನೀನೂ ಸಹ ನಾಶಮಾಡಲ್ಪಡುವೆ. ನೀನೂ ಆ ಪರದೇಶದವರೊಂದಿಗೆ ಬಿದ್ದುಕೊಂಡಿರುವೆ. ಯುದ್ಧದಲ್ಲಿ ಸತ್ತ ಸೈನಿಕರೊಂದಿಗೆ ನೀನು ಮಲಗುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ್ಯವೇ, ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗದಿಂದ ಹತರಾದವರ ನಡುವೆ ಮಲಗುವೆ!
Kannada BSI Bible 2016
ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಫರೋಹನೇ,] ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗಹತರ ನಡುವೆ ಒರಗಿಹೋಗುವಿ!
Kannada Bible (KNCL) BSI 2016
“ಹೀಗೆ ಈಜಿಪ್ಟರು ಸುನ್ನತಿಹೀನರ ಮಧ್ಯೆ ನಾಶವಾಗಿ ಖಡ್ಗಹತರ ನಡುವೆ ಸೇರಿಹೋಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಫರೋಹನೇ, ನೀನೂ ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲಾಗುವೆ. ಖಡ್ಗದಿಂದ ಹತರಾದವರ ಸಂಗಡ ಮಲಗುವೆ.