Ezekiel 32:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎದೋಮನೂ ಅಲ್ಲಿರುವನು. ಅವನ ರಾಜರೂ ಹಿರಿಯರೂ ಅಲ್ಲಿರುವರು. ಅವರೆಲ್ಲಾ ವೀರರಾಗಿದ್ದರೂ ಈ ಬೇರೆ ಜನರೊಂದಿಗೆ ಮಲಗಿದ್ದಾರೆ; ಆ ಪರದೇಶದವರೊಂದಿಗೆ ಪಾತಾಳದಲ್ಲಿ ಬಿದ್ದುಕೊಂಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ.
Kannada BSI Bible 2016
ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎದೋಮೂ ಅದರ ಅರಸರೂ ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ಒರಗಿ ಹೋಗಿದ್ದಾರೆ.
Kannada Bible (KNCL) BSI 2016
“ಎದೋಮೂ ಅದರ ಅರಸರೂ ಎಲ್ಲ ಸರದಾರರೂ ಅಲ್ಲಿದ್ದಾರೆ; ಅವರು ಹಿಂಸಾಚಾರಿಗಳಾಗಿದ್ದು, ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ನೆಲಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಅದರ ಪ್ರಧಾನರೂ ಶೂರರಾಗಿದ್ದರೂ ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಅವರು ಸುನ್ನತಿಯಿಲ್ಲದವರ ಸಂಗಡ ಮತ್ತು ಕುಣಿಗೆ ಇಳಿಯುವವರ ಸಂಗಡ ಹತರಾದವರು.