Ezekiel 32:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಉತ್ತರ ದೇಶದ ನಾಯಕರೆಲ್ಲಾ ಅಲ್ಲಿದ್ದಾರೆ. ಚೀದೋನಿನ ಸೈನಿಕರೂ ಅಲ್ಲಿದ್ದಾರೆ. ಅವರ ಘಲವು ಜನರನ್ನು ಭಯಗ್ರಸ್ತರನ್ನಾಗಿ ಮಾಡಿತ್ತು. ಅವರೂ ಈಗ ಯುದ್ಧದಲ್ಲಿ ಮಡಿದ ಇತರರೊಂದಿಗೆ ಬಿದ್ದುಕೊಂಡಿದ್ದಾರೆ. ತಮ್ಮ ನಾಚಿಕೆಯೊಂದಿಗೆ ಪಾತಾಳವನ್ನು ಸೇರಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
Kannada BSI Bible 2016
ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಉತ್ತರದೇಶದ ಸಕಲಪ್ರಭುಗಳೂ ಸಮಸ್ತ ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.
Kannada Bible (KNCL) BSI 2016
“ಉತ್ತರದೇಶದ ಸಕಲ ರಾಜರುಗಳೂ ಸಮಸ್ತ ಸಿದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರರಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು, ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಲ್ಲಿ ಉತ್ತರದ ರಾಜಕುಮಾರರೂ ಸೀದೋನ್ಯರೆಲ್ಲರೂ ಹತರಾದವರೊಂದಿಗೆ ಇಳಿದು ಅಲ್ಲಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಖಡ್ಗದಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.