Ezekiel 32:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪಾತಾಳಕ್ಕೆ ಸೇರಿದ ಜನರನ್ನು ಫರೋಹನು ನೋಡುವನು. ಅವನೂ ಅವನೊಂದಿಗಿರುವ ಜನರೂ ಸಮಾಧಾನ ಹೊಂದುವರು. ಹೌದು, ಫರೋಹನೂ ಅವನ ಎಲ್ಲಾ ಸೈನಿಕರೂ ಯುದ್ಧದಲ್ಲಿ ಸಾಯುವರು.” ಇದು ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಖಡ್ಗಹತರಾದ ಅವನ ಸಕಲಸೈನಿಕರೂ ಸಮಾಧಾನ ಹೊಂದುವರು. ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
“ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನಹೊಂದುವನು; ಹೌದು, ಫರೋಹನೂ ಖಡ್ಗಹತರಾದ ಅವನ ಸಕಲ ಸೈನಿಕರೂ ಸಮಾಧಾನಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಫರೋಹನು ಹಾಗೂ ಆತನ ಸೈನ್ಯವು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಜನಸಮೂಹದ ವಿಷಯವಾಗಿ ಸಮಾಧಾನ ಹೊಂದುವನು, ಫರೋಹನು ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.