Ezekiel 32:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ನಿನ್ನನ್ನು ಒಣನೆಲದ ಮೇಲೆ ಹಾಕುವೆನು. ಹೊಲದ ಮೇಲೆ ನಿನ್ನನ್ನು ಬಿಸಾಡುವೆನು. ಎಲ್ಲಾ ಪಕ್ಷಿಗಳು ನಿನ್ನನ್ನು ತಿಂದುಬಿಡುವಂತೆ ಮಾಡುವೆನು. ಎಲ್ಲಾ ಕಡೆಗಳಿಂದ ಕಾಡುಮೃಗಗಳು ಬಂದು ನಿನ್ನನ್ನು ಹೊಟ್ಟೆತುಂಬಾ ತಿನ್ನುವಂತೆ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು; ನಿನ್ನನ್ನು ಬಯಲಿನಲ್ಲಿ ಎಸೆದು ಆಕಾಶದ ಪಕ್ಷಿಗಳೆಲ್ಲಾ ನಿನ್ನ ಮೇಲೆ ಎರಗುವಂತೆ ಮಾಡಿ, ಸಮಸ್ತ ಭೂಜಂತುಗಳನ್ನು ನಿನ್ನಿಂದ ತೃಪ್ತಿಗೊಳಿಸುವೆನು.
Kannada BSI Bible 2016
ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು; ನಿನ್ನನ್ನು ಬೈಲಿನಲ್ಲಿ ಎಸೆದು ಆಕಾಶಪಕ್ಷಿಗಳೆಲ್ಲಾ ನಿನ್ನ ಮೇಲೆ ಎರಗುವಂತೆ ಮಾಡಿ ಸಮಸ್ತಭೂಜಂತುಗಳನ್ನು ನಿನ್ನಿಂದ ತೃಪ್ತಿಗೊಳಿಸುವೆನು.
Kannada Bible (KNCL) BSI 2016
ಆಕಾಶದ ಪಕ್ಷಿಗಳು ನಿನ್ನ ಮೇಲೆರಗುವಂತೆ, ಸಮಸ್ತ ಭೂಜಂತುಗಳು ನಿನ್ನಿಂದ ತೃಪ್ತಿಗೊಳ್ಳುವಂತೆ, ನಿನ್ನನೆಸೆದುಬಿಡುವೆ ನೆಲದ ಮೇಲೆ ಬಯಲಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು. ಬಯಲಿನ ಮೇಲೆ ಬಿಸಾಡುವೆನು. ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.