Ezekiel 32:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಮೇಲೆ ಆಕಾಶದಲ್ಲಿ ಹೊಳೆಯುವ ಜ್ಯೋತಿಗಳನ್ನು ಮಂಕುಗೊಳಿಸುವೆನು; ನಿನ್ನ ದೇಶದಲ್ಲಿ ಕತ್ತಲನ್ನು ಬರಮಾಡುವೆನು” ನನ್ನ ಒಡೆಯನಾದ ಯೆಹೋವನು ಇವುಗಳನ್ನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ, ನಿನ್ನ ದೇಶವನ್ನು ಕತ್ತಲು ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮೇಲೆ ಆಕಾಶದಲ್ಲಿ ವಿುನುಗುವ ಸಕಲಜ್ಯೋತಿಗಳನ್ನೂ ನಾನು ಮಸಕುಮಾಡಿ ನಿನ್ನ ದೇಶದಲ್ಲಿ ಕತ್ತಲನ್ನೊಡ್ಡುವೆನು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನಿನ್ನ ಮೇಲೆ ಗಗನದಲಿ ಮಿನುಗುವ ಸಕಲ ಜ್ಯೋತಿಗಳನು ಮುಸುಕು ಮಾಡುವೆನು, ನಿನ್ನ ನಾಡಿನೊಳು ಕತ್ತಲನೊಡ್ಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶದಲ್ಲಿ ಪ್ರಕಾಶಿಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು. ನಾನು ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.