Ezekiel 33:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ನರಪುತ್ರನೇ, ನನ್ನ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನ್ನು ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಙೇಕಾದರೆ ಏನು ಮಾಡಬೇಕು?’ ಎಂದು ಅವರು ಕೇಳಿಯಾರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.
Kannada BSI Bible 2016
ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲಾ.
Kannada Bible (KNCL) BSI 2016
“ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರ ನಮ್ಮ ಮೇಲೆ ಬಿದ್ದಿವೆ; ಅವುಗಳಿಂದ ಕ್ಷೀಣವಾಗಿಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು: ‘ನೀವು ಹೇಳುತ್ತಿರುವುದು ಇದನ್ನೇ: “ನಮ್ಮ ಅಪರಾಧಗಳೂ ನಮ್ಮ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲೇ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು ಎಂದು ಹೇಳುವಿರಲ್ಲಾ?” ’