Ezekiel 33:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಙೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಙೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.
Kannada Bible (KNCL) BSI 2016
ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’