Ezekiel 33:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒತ್ತೆ ತೆಗೆದುಕೊಂಡಿದ್ದ ವಸ್ತುಗಳನ್ನು ಹಿಂದಕ್ಕೆ ಕೊಟ್ಟು, ತಾನು ಕದ್ದುಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಕರವಾದ ಕಟ್ಟಳೆಗಳನ್ನು ಅನುಸರಿಸಿದರೆ ಆ ಮನುಷ್ಯನು ಖಂಡಿತವಾಗಿ ಬಂದುಕುವನು. ಅವನನ್ನು ಸಾಯಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.
Kannada BSI Bible 2016
ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದರೆ ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಜೀವಾಧಾರವಾದ ವಿಧಿಗಳನ್ನು ಅನುಸರಿಸಿ ಸಕಲ ದುಷ್ಕರ್ಮಗಳಿಗೂ ದೂರನಾಗಿರುವ ಪಕ್ಷದಲ್ಲಿ ಸಾಯನು, ಬಾಳೇಬಾಳುವನು.
Kannada Bible (KNCL) BSI 2016
ಅಂದರೆ, ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರವಾದರೆ ಅವನು ಸಾಯನು, ಬಾಳೇ ಬಾಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟನು ತನ್ನ ಒತ್ತೆಯನ್ನು ಮತ್ತು ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಅನ್ಯಾಯವನ್ನು ಮಾಡದೆ ಜೀವನಾಧಾರವಾದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತವಾಗಿ ಬದುಕುವನು.