Ezekiel 33:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ನಿನ್ನ ಜನರು, ‘ಅದು ನ್ಯಾಯವಲ್ಲ. ನನ್ನ ಒಡೆಯನಾದ ಯೆಹೋವನು ಹಾಗೆ ಮಾಡಲಾರನು’ ಎಂದು ಹೇಳುವರು. “ಅಂಥ ಜನರೇ ನ್ಯಾಯವಂತರಲ್ಲ. ಅವರೇ ಘದಲಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.
Kannada BSI Bible 2016
ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿನ್ನ ಜನರು ಕರ್ತನ ಕ್ರಮವು ಸಮವಲ್ಲವೆಂದು ಹೇಳುತ್ತಿದ್ದಾರೆ, ಅವರ ಕ್ರಮವೇ ಸಮವಲ್ಲವಷ್ಟೆ.
Kannada Bible (KNCL) BSI 2016
“ಆದರೆ ನನ್ನ ಜನರು ಸರ್ವೇಶ್ವರನ ಕ್ರಮ ಸರಿಯಲ್ಲವೆಂದು ಹೇಳುತ್ತಿದ್ದಾರೆ. ಬದಲಿಗೆ ಅವರ ಕ್ರಮವೇ ಸರಿಯಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ನಿನ್ನ ಜನರ ಮಕ್ಕಳು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತಾರೆ. ಅವರಿಗಾದರೋ ಅವರ ಮಾರ್ಗವೇ ನೀತಿಯುಕ್ತವಲ್ಲ.