Ezekiel 33:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನು ನ್ಯಾಯವಂತನಲ್ಲ’ ಎಂದು ನೀವು ಹೇಳುತ್ತೀರಿ. ಆದರೆ ನಾನು ಖಂಡಿತವಾಗಿ ಹೇಳುತ್ತೇನೆ, ಇಸ್ರೇಲ್ ಮನೆತನದವರೇ, ಪ್ರತಿಯೊಬ್ಬನೂ ತಾನು ಮಾಡಿದ ಕಾರ್ಯಗಳಿಗಾಗಿ ನ್ಯಾಯ ಹೊಂದುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.”
Kannada BSI Bible 2016
ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ಯೆಹೋವನ ಕ್ರಮವು ಸಮವಲ್ಲವೆಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.
Kannada Bible (KNCL) BSI 2016
ಆದರೆ ನೀವು ಸರ್ವೇಶ್ವರನ ಕ್ರಮವು ಸರಿಯಿಲ್ಲವೆಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುನೀಡುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ, ‘ನೀವು ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಅನ್ನುತ್ತೀರಿ. ಇಸ್ರಾಯೇಲಿನ ಮನೆತನದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯತೀರಿಸುವೆನು.”