Ezekiel 33:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೆರೆಯ ಹನೆಐರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೇ ದಿವಸದಲ್ಲಿ ಜೆರುಸಲೇಮಿನಿಂದ ಒಬ್ಬನು ನನ್ನ ಬಳಿಗೆ ಬಂದನು. ಅವನು ರಣರಂಗದಿಂದ ತಪ್ಪಿಸಿಕೊಂಡು ಘಂದಾತನು. ಅವನು, “ನಗರವು ಪರಾಧೀನವಾಯಿತು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.
Kannada BSI Bible 2016
ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಸೆರೆಯಾಗಿ ಹನ್ನೆರಡನೆಯ ವರುಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಯೆರೂಸಲೇವಿುನಿಂದ ಪಲಾಯನಮಾಡಿದವನೊಬ್ಬನು ನನ್ನ ಬಳಿಗೆ ಬಂದು - ಪಟ್ಟಣವು ಶತ್ರುವಶವಾಯಿತು ಎಂದು ಹೇಳಿದನು.
Kannada Bible (KNCL) BSI 2016
ನಾವು ಸೆರೆಯಾಗಿ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಜೆರುಸಲೇಮಿನಿಂದ ಪಲಾಯನ ಮಾಡಿದವನೊಬ್ಬನು ನನ್ನ ಬಳಿಗೆ ಬಂದು, - ‘ಪಟ್ಟಣವು ಶತ್ರು ವಶವಾಯಿತು’ ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು.