Ezekiel 33:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳಲ್ಲಿ ಇಸ್ರೇಲ್ ಜನರು ವಾಸಿಸುತ್ತಿದ್ದಾರೆ. ಅವರು ಹೇಳುವುದೇನೆಂದರೆ, ‘ಅಘ್ರಹಾಮನು ಒಬ್ಬನೇ. ಈ ದೇಶವನೆಐಲ್ಲಾ ದೇವರು ಅವನಿಗೆ ಕೊಟ್ಟನು. ನಾವು ಈಗ ಘಹಳ ಮಂದಿ ಇದ್ದೇವೆ. ಆದ್ದರಿಂದ ಖಂಡಿತವಾಗಿ ಈ ದೇಶ ನಮಗೇ ಸೇರಿದ್ದಾಗಿದೆ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.
Kannada BSI Bible 2016
ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು - ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತಲ್ಲಾ; ಅದು ಬಹುಜನರಾದ ನಮಗೆ ಸ್ವಾಸ್ತ್ಯವಾಗಿ ಸಿಕ್ಕಿದ್ದು ಏನು ದೊಡ್ಡದು ಅಂದುಕೊಳ್ಳುತ್ತಿದ್ದಾರೆ.
Kannada Bible (KNCL) BSI 2016
“ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು ಹೀಗೆ ಹೇಳುತ್ತಾರೆ, ‘ಅಬ್ರಹಾಮನು ಒಬ್ಬೊಂಟಿಗನಾಗಿದ್ದರೂ ಈ ದೇಶ ಅವನಿಗೆ ಸೊತ್ತಾಗಿ ಸಿಕ್ಕಿತು. ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸೊತ್ತಾಗಿ ಕೊಡಲಾಗಿದೆ,’ ಎಂದು ಹೇಳುತ್ತಾರೆ.