Ezekiel 33:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನಿಮ್ಮ ಕತ್ತಿಯ ಮೇಲೆ ಭರವಸೆಯಿಡುತ್ತೀರಿ. ಪ್ರತಿಯೊಬ್ಬನು ಭಯಂಕರವಾದ ಕೃತ್ಯಗಳನ್ನು ನಡಿಸುತ್ತಾನೆ. ನಿಮ್ಮ ನೆರೆಯವನ ಹೆಂಡತಿಯೊಂದಿಗೆ ಸಂಭೋಗಿಸುವಿರಿ. ಆದ್ದರಿಂದ ನೀವು ಈ ದೇಶವನ್ನು ಹೊಂದಲಾರಿರಿ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?”
Kannada BSI Bible 2016
ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕತ್ತಿಯಲ್ಲೇ ನಿರತರಾಗಿದ್ದೀರಿ, ದುರಾಚಾರನಡಿಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?
Kannada Bible (KNCL) BSI 2016
ನೀವು ಕತ್ತಿ ಬಳಸುವುದರಲ್ಲೇ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಮ್ಮ ಖಡ್ಗದ ಮೇಲೆ ಭರವಸೆ ಇಟ್ಟು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ನಿಮ್ಮ ನೆರೆಯವನ ಹೆಂಡತಿಯನ್ನು ಕೆಡಿಸುವಿರಿ. ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡಿರೇನು?’