Ezekiel 33:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘“ನೀನು ಅವರಿಗೆ ನಿಮ್ಮ ಒಡೆಯನಾದ ಯೆಹೋವನು ಹೀಗೆ ಹೇಳಿದನೆಂದು ತಿಳಿಸಬೇಕು, “ನನ್ನ ಜೀವದಾಣೆ, ಕೆಡವಲ್ಪಟ್ಟ ಪಟ್ಟಣಗಳಲ್ಲಿ ವಾಸಿಸುವ ಜನರು ಕೊಲ್ಲಲ್ಪಡುವರು. ಯಾರಾದರೂ ಪಟ್ಟಣದ ಹೊರಗೆ ಹೋಗಿದ್ದಲ್ಲಿ ಅವರನ್ನು ಕಾಡುಪ್ರಾಣಿಗಳು ತಿನ್ನುವಂತೆ ಮಾಡುವೆನು. ಯಾರಾದರೂ ಕೋಟೆಯೊಳಗಾಗಲಿ ಗುಹೆಯೊಳಗಾಗಲಿ ಸೇರಿಕೊಂಡರೆ ಅವರು ರೋಗದಿಂದ ಸಾಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.
Kannada BSI Bible 2016
ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವದು; ಬೈಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವದು.
Kannada Bible (KNCL) BSI 2016
“ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು.