Ezekiel 33:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಈ ದೇಶವನ್ನು ಬರಿದಾಗಿಯೂ ಘಂಜರು ಭೂಮಿಯನ್ನಾಗಿಯೂ ಮಾಡುವೆನು. ಈ ದೇಶವು ಹೆಮ್ಮೆಪಟ್ಟುಕೊಳ್ಳುತ್ತಿದ್ದ ವಿಷಯಗಳನೆಐಲ್ಲಾ ಅವರು ಕಳೆದುಕೊಳ್ಳುವರು. ಇಸ್ರೇಲಿನ ಪರ್ವತಗಳು ಬೋಳುಗುಡ್ಡಗಳಾಗುವವು. ಯಾರೂ ಅದನ್ನು ದಾಟಿ ಹೋಗಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.
Kannada BSI Bible 2016
ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದೇಶವನ್ನು ಹಾಳುಪಾಳುಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವದು; ಇಸ್ರಾಯೇಲಿನ ಮಲೆನಾಡು ಬೀಡುಬೀಳುವದು; ಯಾರೂ ಅಲ್ಲಿ ಹಾದುಹೋಗರು.
Kannada Bible (KNCL) BSI 2016
ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈ ದೇಶವನ್ನು ಹಾಳುಪಾಳುಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವುದು. ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅದರ ಮೂಲಕ ಹಾದು ಹೋಗುವುದಿಲ್ಲ.