Ezekiel 33:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ನರಪುತ್ರನೇ, ನಿನ್ನ ವಿಷಯದಲ್ಲಿ ನಿನ್ನ ಜನರು ಗೋಡೆಗೆ ಒರಗಿಕೊಂಡೂ ಬಾಗಿಲಿನ ನಡುವೆ ನಿಂತುಕೊಂಡೂ ಮಾತನಾಡಿಕೊಳ್ಳುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು, “ಬನ್ನಿ, ಯೆಹೋವನು ಹೇಳುವುದನ್ನು ನಾವು ಹೋಗಿ ಕೇಳೋಣ”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.
Kannada BSI Bible 2016
ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು - ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ ಎಂದು ಹೇಳಿಕೊಳ್ಳುತ್ತಿದ್ದಾರೆ.
Kannada Bible (KNCL) BSI 2016
“ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿನ್ನ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಸರ್ವೇಶ್ವರನ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿಜ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಯೆಹೋವ ದೇವರ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.