Ezekiel 33:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಅದನ್ನು ಕೇಳಿದರೂ ಅಲಕ್ಷ್ಯ ಮಾಡಿದಾಗ ಶತ್ರುವು ಬಂದು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆಗ ಅವರ ಮರಣಕ್ಕೆ ಅವರೇ ಕಾರಣರಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.
Kannada BSI Bible 2016
ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಂಬಿನ ಕೂಗನ್ನು ಕೇಳಿದ ಯಾವನೇ ಆಗಲಿ ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ ತನ್ನ ಮರಣಕ್ಕೆ ತಾನೇ ಕಾರಣ.
Kannada Bible (KNCL) BSI 2016
ಕೇಳಿಯೂ ಯಾವನಾದರು ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಕಾರಣನಾಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವನು ಕೊಂಬಿನ ಧ್ವನಿಯನ್ನು ಕೇಳಿ ಎಚ್ಚರವಾಗುವುದಿಲ್ಲವೋ ಅವನನ್ನು ಖಡ್ಗವು ನಾಶಮಾಡಿದರೆ ಅವನ ಸಾವಿಗೆ ಅವನೇ ಹೊಣೆಯಾಗುವನು.